ಮಂಗಳೂರು: ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸೆ.23ರಂದು ಸಂಜೆ 6:30ಕ್ಕೆ ನಗರದ ಬಾವುಟಗುಡ್ಡೆ ಬಳಿ ವಳಚ್ಚಿಲ್ ನಿವಾಸಿ ಹನೀಫ್ (23)ನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಗುಜ್ಜರಕೆರೆ ಬಳಿ ಮಾದಕ ವಸ್ತು ಸೇವಿಸಿದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯ ಬೇಕೂರು ನಿವಾಸಿ ಝನುಲ್ ಅಬಿದೀನ್ (25) ಎಂಬಾತನನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.



