Home Crime ಪುತ್ತೂರು: ಟ್ಯಾಂಕರ್‌ಗೆ ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು…!!

ಪುತ್ತೂರು: ಟ್ಯಾಂಕರ್‌ಗೆ ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು…!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಟ್ಯಾಂಕರ್ ಲಾರಿಗೆ ಮೋಟಾರ್ ಸೈಕಲ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.

ಮೃತರನ್ನು ಅಣ್ಣು ಎಂದು ತಿಳಿದು ಬಂದಿದೆ.

ಪೊಲೀಸ್ ಮಾಹಿತಿಯಂತೆ, ಅಣ್ಣು ಅವರು KA-21-V-4177 ನೋಂದಣಿ ಸಂಖ್ಯೆಯ ಮೋಟಾರ್ ಸೈಕಲ್‌ನಲ್ಲಿ ಗೋಳಿತೊಟ್ಟಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು 11 ಗಂಟೆಗೆ ನೀರಕಟ್ಟೆ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ರಸ್ತೆಯ ತೀರಾ ಬಲಭಾಗದಲ್ಲಿ ಚಲಿಸಿದ ವೇಳೆ, ಎದುರಿನಿಂದ ಮಂಗಳೂರು ಕಡೆಯಿಂದ ಹಾಸನ ಕಡೆಗೆ ಬರುತ್ತಿದ್ದ KA-22-AB-2469 ನೋಂದಣಿ ಸಂಖ್ಯೆಯ ಟ್ಯಾಂಕರ್ ಲಾರಿಯ ಮುಂಭಾಗದ ಬಲಬದಿಯ ಮಡ್‌ಗಾರ್ಡ್‌ಗೆ ಬೈಕ್ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರ. 146/2026, ಕಲಂ 281, 106(1) ಬಿಎನ್‌ಎಸ್ ಅಡಿಯಲ್ಲಿ ತನಿಖೆ ಮುಂದುವರಿದಿದೆ.