ಮಣಿಪಾಲ: ಇಲ್ಲಿನ ಕಾಲೇಜೊಂದರಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ತನ್ನ ರೂಮ್‌ನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿನೋಬಾ ನಗರ ನಿವಾಸಿ ಸಮರ್ಥ ಆರ್. ಪಾಟೀಲ್ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮಣಿಪಾಲ ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.



