Home Crime ಮಂಗಳೂರು: ಮಾದಕ ವಸ್ತು ಸೇವನೆ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು…!!

ಮಂಗಳೂರು: ಮಾದಕ ವಸ್ತು ಸೇವನೆ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು…!!

ಮಂಗಳೂರು: ನಗರದ ಶಿವಭಾಗ ಬಳಿ ಮಾದಕ ವಸ್ತು ಸೇವನೆ ಮಾಡಿರುವ ಶಂಕೆಯಲ್ಲಿ ಇಬ್ಬರು ಯುವಕರನ್ನು ಮಂಗಳೂರು ಪೂರ್ವ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ಸೆ.26ರಂದು ಸಂಜೆ ಸುಮಾರು 5:45ರ ವೇಳೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪ್ರತಿಭಾ ಕೆ.ಎಚ್. ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಶಿವಭಾಗ ಬಳಿ ಇಬ್ಬರು ಯುವಕರು ತೊದಲುತ್ತಾ ಮಾತನಾಡುತ್ತಿರುವುದು ಹಾಗೂ ಮಾದಕ ವಸ್ತು ಸೇವನೆ ಮಾಡಿರುವಂತೆ ಕಂಡುಬಂದಿದೆ.

ವಶಕ್ಕೆ ಪಡೆದು ವಿಚಾರಿಸಿದಾಗ ಅವರು ಮೊಹಮ್ಮದ್ ಇರ್ಪಾದ್ ಅಲಿಯಾಸ್ ಮಹಮ್ಮದ್ ನಾಸೀರ್ (27) ಹಾಗೂ ಫಹಾದ್ ಅಬ್ದುಲ್ ರೆಹಿಮಾನ್ (26) ಎಂದು ತಿಳಿದುಬಂದಿದೆ.

ಇವರನ್ನು ವೈದ್ಯಕೀಯ ತಪಾಸಣೆಗಾಗಿ ಎ.ಜೆ. ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ Amphetamine ಮತ್ತು Methamphetamine ಸೇವನೆ ಪಾಸಿಟಿವ್ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಮಾದಕ ದ್ರವ್ಯ ಕಾಯ್ದೆಯಡಿ ಮಂಗಳೂರು ಪೂರ್ವ ಠಾಣೆ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.