Home Crime ಮಣಿಪಾಲ: ಇಂದ್ರಾಳಿ ರೈಲ್ವೆ ಗೋಡಾನ್ ಬಳಿ ಅಂದರ್ ಬಾಹರ್ ಜುಗಾರಿ ಅಡ್ಡೆ ಮೇಲೆ ದಾಳಿ :...

ಮಣಿಪಾಲ: ಇಂದ್ರಾಳಿ ರೈಲ್ವೆ ಗೋಡಾನ್ ಬಳಿ ಅಂದರ್ ಬಾಹರ್ ಜುಗಾರಿ ಅಡ್ಡೆ ಮೇಲೆ ದಾಳಿ : 6 ಮಂದಿ ವಶಕ್ಕೆ…!!

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಹಣ ಪಣಕ್ಕಿಟ್ಟು ಜುಗಾರಿ ಆಡುತ್ತಿದ್ದ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಗೋಡಾನ್ ಬಳಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ನಡೆಯುತ್ತಿದೆ ಎಂಬ ಮಾಹಿತಿ ಬಂದ ಮೇರೆಗೆ ಸೆ.29 ರಂದು ಪಿಎಸ್‌ಐ ತಿಮ್ಮೇಶ್ ಬಿ.ಎನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ದಾಳಿ ವೇಳೆ ಜುಗಾರಿ ಆಡುತ್ತಿದ್ದ ಮಲ್ಲಿಕಾರ್ಜುನ ಬಸವನಗೌಡ,ಭರತ್ ಕುಮಾರ್ ಬಿ.ಹೆಚ್,ವಸಂತ ಕೋಟ್ಯಾನ್,
ಜಗದೀಶ ಮಲ್ಲಪ್ಪ ಕಟಾಪುರ,ಅಮೀತ್ ಬಿ,ಶಿವಕುಮಾರ್
ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಅವರಿಂದ ಜುಗಾರಿಗೆ ಬಳಸಿದ ರೂ. 6,690 ನಗದು ಮತ್ತು ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 160/2026, ಕಲಂ 87 KP Act ರಂತೆ ಪ್ರಕರಣ ದಾಖಲಾಗಿದೆ. ಬಂಧಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.