Home Latest ಮಣಿಪಾಲ: KMC ಆಸ್ಪತ್ರೆಯ 4ನೇ ಮಹಡಿಯಿಂದ ಬಿದ್ದು ಒಳರೋಗಿಗೆ ಗಂಭೀರ ಗಾಯ – ವಿಡಿಯೊ ವೈರಲ್…!!

ಮಣಿಪಾಲ: KMC ಆಸ್ಪತ್ರೆಯ 4ನೇ ಮಹಡಿಯಿಂದ ಬಿದ್ದು ಒಳರೋಗಿಗೆ ಗಂಭೀರ ಗಾಯ – ವಿಡಿಯೊ ವೈರಲ್…!!

ಮಣಿಪಾಲ, ಸೆ.30: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ತೀರ್ಥಹಳ್ಳಿಯ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

ಮಾಹಿತಿ ಪ್ರಕಾರ, ಇವರು ಕೆಲ ಸಮಯದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಇಂದು ಆಸ್ಪತ್ರೆಯ 4ನೇ ಮಹಡಿಯ ಕಿಟಕಿ ಮೂಲಕ ಪರಾರಿಯಾಗಲು ಯತ್ನಿಸಿದಾಗ ಆಯಾ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡ ಅವರಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.