ಮಲ್ಪೆ: ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ಛತ್ತೀಸ್‌ಗಢ ಮೂಲದ 28 ವರ್ಷದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಛತ್ತೀಸ್‌ಗಢ ಮೂಲದ ದ್ವಾರಿಕ ಶಿಕಾರ್ (28) ನಾಪತ್ತೆಯಾದವರು. ಇವರು ಕೊಡವೂರು ಗ್ರಾಮದ ಮಲ್ಪೆ ಬಂದರಿನಿಂದ ಶ್ರೀ ವೀರಾಂಜನೇಯ ಪರ್ಸಿಯನ್ ಬೋಟ್ (IND-KA-02-MM-473)ನಲ್ಲಿ ಮೀನುಗಾರಿಕೆ ಕೆಲಸಕ್ಕೆ ತೆರಳಿದ್ದರು.
ಸೆಪ್ಟೆಂಬರ್ 25ರಂದು ಬೆಳಿಗ್ಗೆ ಸುಮಾರು 7:30ರಿಂದ 8 ಗಂಟೆಯ ನಡುವೆ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



