Home Crime ಕುಂದಾಪುರ: ಅನಾರೋಗ್ಯದಿಂದ ನೊಂದು ಮಹಿಳೆ ಆತ್ಮಹತ್ಯೆ…!!

ಕುಂದಾಪುರ: ಅನಾರೋಗ್ಯದಿಂದ ನೊಂದು ಮಹಿಳೆ ಆತ್ಮಹತ್ಯೆ…!!

ಕುಂದಾಪುರ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 62 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಶಾರದ (62) ಎಂದು ತಿಳಿಯಲಾಗಿದೆ.

ಅವರು ಸಕ್ಕರೆ ಕಾಯಿಲೆ, ಕಾಲು ನೋವು ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಸಂಬಂಧಿ ಕಾಯಿಲೆಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಮಣಿಪಾಲಕ್ಕೆ ಕರೆದೊಯ್ಯುವಂತೆ ವೈದ್ಯರು ಒಂದು ವಾರದ ಹಿಂದೆ ಸಲಹೆ ನೀಡಿದ್ದರು ಎನ್ನಲಾಗಿದೆ.

ಈ ಸಮಸ್ಯೆಗಳಿಂದ ನೊಂದು, ಸೆಪ್ಟೆಂಬರ್ 30ರಂದು ಬೆಳಿಗ್ಗೆ 10:30ರಿಂದ 10:45ರ ನಡುವಿನ ಅವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾರದ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.