Home Latest ಉಡುಪಿ : ಬೈಲೂರಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ…!!

ಉಡುಪಿ : ಬೈಲೂರಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ…!!

ಉಡುಪಿ : ನಗರದ ಪಡುಬೈಲೂರು ಶ್ರೀ ಇಷ್ಟ ಮಹಾಲಿಂಗೇಶ್ವರ ಹುಲಿವೇಷ ತಂಡ ಟ್ರಸ್ಟ್ ತನ್ನ ಸಾರ್ಥಕ 11 ವರ್ಷಗಳ ಸೇವೆಯನ್ನು ಪೂರೈಸುತ್ತಿರುವ ಸಂಧರ್ಭದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದ್ದಾರೆ.

ಬೈಲೂರು ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ದಿನಾಂಕ 2 ಅಕ್ಟೋಬರ್ ಶುಕ್ರವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿರುವ ಈ ಶಿಬಿರದ ಉದ್ಘಾಟನೆಯನ್ನು ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಸರಕಾರದ ವಿಷನ್ ಕಮಿಟಿ ಅಧ್ಯಕ್ಷ ರಾದ ಡಾ . ಕೃಷ್ಣ ಪ್ರಸಾದ್ ಕೂಡ್ಲು ಅವರು ನಡೆಸಲಿದ್ದಾರೆ. ಉಡುಪಿಯ ಶಾಸಕರಾದ ಶ್ರೀ ಯಶ್ಪಾಲ್ ಎ ಸುವರ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಹಿರಿಯ ನ್ಯಾಯವಾದಿ ಹಾಗೂ ದೇವಸ್ಥಾನದ ಸಲಹಾ ಸಮಿತಿಯ ಸದಸ್ಯ ಶ್ರೀ ಮಟ್ಟಾರು ರತ್ನಾಕರ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮೊಕ್ತೇಸರ ಶ್ರೀ ಮೋಹನ ಮುದ್ದಣ್ಣ ಶೆಟ್ಟಿ ಹಾಗೂ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀ ಕೃಷ್ಣಮೂರ್ತಿ ತಂತ್ರೀಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ನೇತ್ರ ಉಚಿತ ತಪಾಸಣೆ, ಲಭ್ಯವಿರುವ ಉಚಿತ ಔಷಧಿ ವಿತರಣೆ, ಅಗತ್ಯ ಕಂಡು ಬಂದಂತವರಿಗೆ ಉಚಿತ ಕನ್ನಡಕ ನೀಡುವ ವ್ಯವಸ್ಥೆ ಹಾಗೂ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.