Home Crime ಬಂಟ್ವಾಳ: ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ…!!

ಬಂಟ್ವಾಳ: ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ…!!

ಬಂಟ್ವಾಳ: ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 24 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಸೆ.30ರ ಮುಂಜಾನೆ ಬಂಟ್ವಾಳದ ಬಾಳ್ತಿಲ, ಪುರ್ಲಿಪ್ಪಾಡಿ ರಾಷ್ಟ್ರೀಯ ಹೆದ್ದಾರಿ ಫ್ಲೈಓವರ್‌ನಲ್ಲಿ ನಡೆದಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ KA-19-D-7120 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದು ಪರಿಶೀಲಿಸಿದ್ದಾರೆ.

ಈ ವೇಳೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಲಾರಿಯೊಳಗೆ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ ಒಟ್ಟು 24 ಜಾನುವಾರುಗಳು ಪತ್ತೆಯಾಗಿವೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 134/2026ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.