ಬಂಟ್ವಾಳ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಜೆ ಬಾಳ್ತಿಲ ಗ್ರಾಮದ ದಾಸಕೋಡಿಯಲ್ಲಿ ನಡೆದಿದೆ.
ಮೃತರನ್ನು ಹರೀಶ್ ಎಂದು ಗುರುತಿಸಲಾಗಿದೆ. ಬಾಳ್ತಿಲ ಗ್ರಾಮದ ದಾಸಕೋಡಿ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಮಾಣಿ ಕಡೆಯಿಂದ ಕಲ್ಲಡ್ಕ ಕಡೆಗೆ ಬರುತ್ತಿದ್ದ KA-02-MC-7994 ನೋಂದಣಿ ಸಂಖ್ಯೆಯ ಕಾರು ಹರೀಶ್ ಅವರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಹರೀಶ್ ಕಾರಿನ ಬಾನೆಟ್ ಹಾಗೂ ಗ್ಲಾಸ್ ಮೇಲೆ ಬಿದ್ದು ಬಳಿಕ ರಸ್ತೆಗೆ ಎಸೆಯಲ್ಪಟ್ಟಿದ್ದರು. ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ವೈದ್ಯರು ಪರೀಕ್ಷಿಸಿ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



