ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಕಾವ್ರಾಡಿ ಗ್ರಾಮದ 20 ವರ್ಷದ ಅನ್ವಿತ್ ಎಂಬ ಯುವಕ ಕಾಲೇಜಿಗೆ ತೆರಳಿ ನಾಪತ್ತೆಯಾಗಿರುವ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 30ರಂದು ಬೆಳಿಗ್ಗೆ 7:30ರ ಸುಮಾರಿಗೆ ಅನ್ವಿತ್ ಅವರು ಕಾಲೇಜು ಸಮವಸ್ತ್ರ ಧರಿಸಿಕೊಂಡು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಮನೆಯಿಂದ ಕಾಲೇಜಿಗೆ ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಸ್ ಆಗದೆ ಕಾಣೆಯಾಗಿದ್ದಾರೆ.
ಈ ಬಗ್ಗೆ ತಂದೆ ಉದಯ್ ಶೇಟ್ (45) ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 55/2026ರಂತೆ ಪ್ರಕರಣ ದಾಖಲಾಗಿದ್ದು, ಯುವಕನ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



