ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದ ಮೇರೆಗೆ 26 ವರ್ಷದ ಯುವಕನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 1ರಂದು ಸಂಜೆ 5.05ರ ಸುಮಾರಿಗೆ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಕೆ.ಸಿ. ನಗರ ಜಂಕ್ಷನ್ ಬಳಿ ಈ ಘಟನೆ ನಡೆದಿದೆ.
ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆಶಿಕ್ ಅಹ್ಮದ್ @ ಅಹಮ್ಮದ್ ಆಶಿಕ್ @ ಕೊಳ್ಳೆ ಆಶಿಕ್ (26) ಎಂಬಾತನನ್ನು ಉಳ್ಳಾಲ ಠಾಣೆ ಪಿಎಸ್ಐ ರೇವಣ್ಣ ಸಿದ್ದಪ್ಪ ಅವರು ಪತ್ತೆಹಚ್ಚಿದ್ದಾರೆ.
ಬಳಿಕ ಆರೋಪಿಯನ್ನು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಹಾಜರುಪಡಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಹಾಗೂ ಟಾಕ್ಸಿಕಾಲಜಿ ಅನಾಲಿಸಿಸ್ ವರದಿಯಲ್ಲಿ ಆರೋಪಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ.



