Home Crime ಮಂಗಳೂರು: ಮಾದಕ ವಸ್ತು ಸೇವನೆ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು…!!

ಮಂಗಳೂರು: ಮಾದಕ ವಸ್ತು ಸೇವನೆ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು…!!

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ 34 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಜೆ ಪಾಂಡೇಶ್ವರ ಕಟ್ಟೆ ಬಳಿ ವ್ಯಕ್ತಿಯೊಬ್ಬ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸರು, ಸಮವಸ್ತ್ರದಲ್ಲಿದ್ದ ಸಿಬ್ಬಂದಿಯನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಮೊಹಮ್ಮದ್ ಶರೀಪ್ (34) ಎಂಬಾತನ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇವನೆಯ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಲಾಗಿದೆ. ಈ ವೇಳೆ ಆತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಬಳಿಕ ಆತನನ್ನು ಮಂಗಳೂರಿನ ಕುಂಟಿಕಾನ ಬಳಿಯ ಎ.ಜೆ. ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ ಮೆಥಾಂಫೆಟಮೈನ್ ಹಾಗೂ ಟೆಟ್ರಾಹೈಡ್ರೋಕ್ಯಾನಾಬಿನಾಯ್ಡ್ (ಮರಿಜುವಾನಾ) ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮೊಹಮ್ಮದ್ ಶರೀಪ್ ವಿರುದ್ಧ ಮಾದಕ ದ್ರವ್ಯ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.