ಕುಂದಾಪುರ : ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯ ಅಂಗವಾಗಿ ಲಯನ್ಸ್ ಇಂಟರ್‌ನ್ಯಾಷನಲ್ ವಲಯ 1, ಪ್ರಾಂತ್ಯ 2 ಹಾಗೂ ಜಿಲ್ಲೆ 317ಸಿ ವತಿಯಿಂದ ಕುಂದಾಪುರದ ಕೋಡಿ ಬೀಚ್ ನಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ನಡೆಯಿತು.
ಕುಂದಾಪುರದ ಕೋಡಿ ಚಕ್ರೇಶ್ವರಿ ಬೀಚ್ ಸಮೀಪ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ನಡೆದ ಬೃಹತ್ ಕಡಲ ತೀರ ಸ್ವಚ್ಚತಾ ಅಭಿಯಾನದಲ್ಲಿ ಲಯನ್ಸ್ ಕ್ಲಬ್‌ನ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡು ಕಡಲತೀರದ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.
ಗಾಂಧೀಜಿಯವರ ಸ್ವಚ್ಛತೆಯ ಪರಿಕಲ್ಪನೆಯನ್ನು ಸಾಕಾರಗೊಳಿಸುವುದರ ಜತೆಗೆ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬೃಹತ್ ಅಭಿಯಾನ ಆಯೋಜಿಸಲಾಗಿತ್ತು. ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲಾ 317ಸಿ ಗವರ್ನರ್ ಪಿಎಂಜೆಎಫ್ ಲಯನ್ ರಾಜೀವ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.



