Home Crime ಬಂಟ್ವಾಳ: ಕೋಳಿ ಅಂಕಕ್ಕೆ ಪೊಲೀಸರ ದಾಳಿ : ಓರ್ವ ವಶ…!!

ಬಂಟ್ವಾಳ: ಕೋಳಿ ಅಂಕಕ್ಕೆ ಪೊಲೀಸರ ದಾಳಿ : ಓರ್ವ ವಶ…!!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಮಂಚಕಲ್ಲು ಮನಿಪಾಲ್ ದೋಟ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ಟೊಬರ್ 2ರಂದು ರಾತ್ರಿ ಬೀಟ್ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿ ಕೋಳಿಗಳ ಕಾಲಿಗೆ ಸಣ್ಣ ಕತ್ತಿ ಕಟ್ಟಿ ಹಿಂಸಾತ್ಮಕವಾಗಿ ಕಾದಾಟ ನಡೆಸಿಸುತ್ತಿದ್ದ ಆರೋಪ ಕೇಳಿಬಂದಿದೆ.

ಪೊಲೀಸರನ್ನು ಕಂಡು ಮೂವರು ಸ್ಥಳದಿಂದ ಪರಾರಿಯಾಗಿದ್ದು, ಚಂದ್ರ (52), ಮಂಡಾಡಿ, ಬಿ ಕಸ್ಬಾ ಗ್ರಾಮ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಕೋಳಿ ಅಂಕ ನಡೆಸಲು ಯಾವುದೇ ಪರವಾನಗಿ ಇಲ್ಲದಿರುವುದು ಬೆಳಕಿಗೆ ಬಂದಿದೆ.

ದಾಳಿಯ ವೇಳೆ ನಾಲ್ಕು ಕೋಳಿಗಳು, ಎರಡು ಬಾಲುಗಳು, ₹550 ನಗದು ಹಾಗೂ ಎರಡು ಜಾರ್ಜರ್ ಲೈಟ್‌ಗಳು ಸೇರಿದಂತೆ ಒಟ್ಟು ₹2,060 ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.