Home Crime ಉಡುಪಿ : ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ಪ್ರಯಾಣಿಕ ಹಳಿಯಲ್ಲಿ ಸಿಲುಕಿ ಸಾವು…!!

ಉಡುಪಿ : ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ಪ್ರಯಾಣಿಕ ಹಳಿಯಲ್ಲಿ ಸಿಲುಕಿ ಸಾವು…!!

ಉಡುಪಿ:‌ನಗರದ ಸಮೀಪ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಸಂಭವಿಸಿದೆ.

ದೆಹಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್ ಸಂಖ್ಯೆ 12284 ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ರೈಲಿಗೆ ಇಂದ್ರಾಳಿ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ.

ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಆರ್‌ಪಿಎಫ್ ಸಿಬ್ಬಂದಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತ ವ್ಯಕ್ತಿಯ ಬಳಿ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.

ಮೃತರ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.