ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಿಲಿಯೂರ ಪದವು ಎಂಬಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಸಂತೋಷ್ ಆಚಾರ್ಯ (39) ಎಂದು ತಿಳಿದು ಬಂದಿದೆ.
ಮೃತರ ಪತ್ನಿ ಚೈತ್ರ (32) ಅವರು ಅಕ್ಟೋಬರ್ 2ರಂದು ಇಬ್ಬರು ಮಕ್ಕಳೊಂದಿಗೆ ತಾಯಿ ಮನೆಗೆ ತೆರಳಿದ್ದರು. ಅಕ್ಟೋಬರ್ 4ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಸೋದರ ಮಾವ ಚಂದ್ರಯ್ಯ ಆಚಾರ್ಯ ಕರೆ ಮಾಡಿ ಸಂತೋಷ್ ಅವರು ಮನೆಯಲ್ಲಿ ನೇಣು ಬಿಗಿದುಕೊಂಡಿರುವ ವಿಚಾರ ತಿಳಿಸಿದ್ದಾರೆ.
ಮನೆಗೆ ಬಂದು ಪರಿಶೀಲಿಸಿದಾಗ ಸಂತೋಷ್ ಅವರು ಮೃತಪಟ್ಟಿರುವುದು ಕಂಡುಬಂದಿದೆ. ಜೀವನದಲ್ಲಿ ಮನನೊಂದು ಅಕ್ಟೋಬರ್ 3ರ ರಾತ್ರಿ 9 ಗಂಟೆಯಿಂದ ಅಕ್ಟೋಬರ್ 4ರ ಬೆಳಿಗ್ಗೆ 6 ಗಂಟೆಯ ನಡುವಿನ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಸಂಖ್ಯೆ 53/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.



