ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ರಂಗನಾಥ (56) ಎಂದು ತಿಳಿಯಲಾಗಿದೆ.
ರಂಗನಾಥ ಅವರು ತಾಯಿಯೊಂದಿಗೆ ವಾಸವಾಗಿದ್ದರು. ಅಕ್ಟೋಬರ್ 1ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಗದ್ದೆಗೆ ಹಾಕುವ ವಿಷ ಸೇವಿಸಿದ್ದರು.
ವಿಷ ಸೇವಿಸಿರುವುದು ತಿಳಿದು ಬಂದ ಬಳಿಕ ಸ್ಥಳೀಯರು ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು.
ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಂಗನಾಥ ಅವರು ಅಕ್ಟೋಬರ್ 4ರಂದು ಬೆಳಿಗ್ಗೆ 6 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಸಂಖ್ಯೆ 55/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.



