ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ತಾರ್ಕಿಮಕ್ಕಿ ಎಂಬಲ್ಲಿ 26 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ.
ನಾಪತ್ತೆಯಾದ ಯುವಕನನ್ನು ಕವೀನಾ (26) ಎಂದು ತಿಳಿದು ಬಂದಿದೆ.
ಇವರು ಹಾಲ್ಕಲ್ ಬಳಿ ಸ್ವಂತ ಟಿಪ್ಪರ್ ಹೊಂದಿದ್ದು, ಕಳೆದ 3–4 ವರ್ಷಗಳಿಂದ ವ್ಯವಹಾರ ನಡೆಸುತ್ತಿದ್ದರು.
ಅಕ್ಟೋಬರ್ 2ರಂದು ಸಂಜೆ 6:30ರ ಸುಮಾರಿಗೆ ಸ್ನೇಹಿತ ದೇವೇಂದ್ರ ಅವರ ಮನೆಗೆ ತೆರಳಿ, ಅಲ್ಲಿಂದ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದರು.
ಆದರೆ ಬಳಿಕ ಮನೆಗೆ ವಾಪಸ್ ಬಂದಿಲ್ಲ.
ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರೂ ಕವೀನಾ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಇದೀಗ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಯುವಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 27/2026ರಂತೆ ಗಂಡಸು ಕಾಣೆಯಾದ ಪ್ರಕರಣ ದಾಖಲಾಗಿದೆ.



