ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದ ಆರೋಪಿಗಳಾದ ಮಹಮ್ಮದ್ ಹನೀಫ್ ಹಾಗೂ ಫಯಾಜ್ ಮಹಮ್ಮದ್ ಅವರನ್ನು ಮಣಿಪಾಲ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ಚೇತನ್ ಹಾಗೂ ಮಂಜುನಾಥ ಅವರು ಉಳ್ಳಾಲ ಮತ್ತು ತಲಪಾಡಿ ಪ್ರದೇಶಗಳಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ತಲಾ 10,000 ರೂ. ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.



