Home Crime ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ…!!

ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ…!!

ಪುತ್ತೂರು: ಕೊಲೆ ಪ್ರಕರಣವೊಂದರ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಕಲಾಪದ ನಡುವೆಯೇ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಇಲ್ಲಿನ ನ್ಯಾಯಾಲಯ 2 ವರ್ಷಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದೆ.

ಸಿರಿಬಾಗಿಲು ನಿವಾಸಿ ಜಯೇಶ್ ಅಲಿಯಾಸ್ ಜಯೇಶ್ ಕಾಂತ್ ಎಸ್, ಶಾಹಿರ್ ಅಲಿಯಾಸ್ ಶಾಕಿರ್ (41) ಶಿಕ್ಷೆಗೆ ಗುರಿಯಾದ ಅಪರಾಧಿ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಾರಾಗೃಹದಲ್ಲಿದ್ದ ಈತನನ್ನು 2016ರ ಏಪ್ರಿಲ್ 5ರಂದು ವಿಚಾರಣೆಗಾಗಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಈ ವೇಳೆ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ಆತ ಪೊಲೀಸರ ಕಣ್ತಪ್ಪಿಸಿ ಏಕಾಏಕಿ ಓಡಿಹೋಗಲು ಯತ್ನಿಸಿದ್ದ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 224ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಪುತ್ತೂರು ನಗರ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಖಾದರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 2 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಕಾನೂನು ಅಭಿಯೋಜಕ ಮನೋಜ್ ಕುಮಾರ್ ವಾದ ಮಂಡಿಸಿದ್ದರು.