ಕಾರ್ಕಳ, ಅಕ್ಟೋಬರ್ 6: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಆತ್ಮಹತ್ಯೆಗೆ ಶರಣಾದವರು ಕಾರ್ಕಳದ ಮಂಜುನಾಥ್ ಪೈ ಎಂದು ಮಾಹಿತಿ ತಿಳಿದು ಬಂದಿದೆ.
ಹಣಕಾಸಿನ ಸಮಸ್ಯೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇವರ ಆತ್ಮಹತ್ಯೆಗೆ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



