Home Crime ಕುಂದಾಪುರ: ಮದ್ಯ ವ್ಯಸನದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

ಕುಂದಾಪುರ: ಮದ್ಯ ವ್ಯಸನದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

ಕುಂದಾಪುರ: ಕಾವ್ರಾಡಿ ಗ್ರಾಮದ ಅರಾರಿ ಮೂಡುವಾಲ್ತೂರು ಎಂಬಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಸುಧಾಕರ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ. ವಿಪರೀತ ಮದ್ಯ ವ್ಯಸನಿಯಾಗಿದ್ದ ಸುಧಾಕರ ಶೆಟ್ಟಿ ಇತ್ತೀಚೆಗೆ ಬೆನ್ನು ಹಾಗೂ ಸೊಂಟ ನೋವಿನಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಪಡೆಯದೆ ಮದ್ಯಪಾನ ಮಾಡುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಅಕ್ಟೋಬರ್ 5ರ ಸಂಜೆ 6 ಗಂಟೆಯಿಂದ ಅಕ್ಟೋಬರ್ 6ರ ಬೆಳಗ್ಗೆ 6:45ರ ನಡುವಿನ ಅವಧಿಯಲ್ಲಿ ಮನೆಯೊಳಗಿನ ಕೋಣೆಯಲ್ಲಿ ಮರದ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.