Home Crime ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಮಂಗಳೂರು : 13 ವರ್ಷದ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಉಪ್ಪಿನಂಗಡಿ ಠಾಣೆಯ ಪೊಲೀಸರ ಸಹಕಾರದಿಂದ ಬಂಧಿಸಿದ್ದಾರೆ.

ಬಂಧಿತ ಆರೋಪಿ ನೆಕ್ಕಿಲಾಡಿ ಗ್ರಾಮದ ಮುಸ್ತಫಾ ಎಂದು ತಿಳಿದು ಬಂದಿದೆ.

2015ರಲ್ಲಿ ಈತ ಶಿಕ್ಷೆಯ ವಿರುದ್ಧ ರಾಜ್ಯ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಆ ಬಳಿಕ ಈತ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಹೈಕೋರ್ಟ್ ಈತನ ವಿರುದ್ಧ ಬಂಧನ ವಾರೆಂಟ್ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ವಿಜಯಕ್ರಾಂತಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.