ಕಾಪು : ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ರಿಪ್ – ರ‍್ಯಾಪ್ ತುರ್ತು ಪ್ರತಿಬಂಧಕ ಕಾಮಗಾರಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಹರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೋಭಾ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಶಾಂತ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.