Home Crime ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ…!!

ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ…!!

ಶಿವಮೊಗ್ಗ : ನಗರದ ತುಂಗನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುಟ್ಟಪ್ಪನ ಕ್ಯಾಂಪ್ ಬಳಿ ಬುಧವಾರ ತುಂಗಾ ನದಿಯಲ್ಲಿ ನೀರುಪಾಲಾಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಮೃತ ಯುವಕನನ್ನು ಫೈಜಾನ್ ಎಂದು ಗುರುತಿಸಲಾಗಿದೆ.

ನಿನ್ನೆ ಇಬ್ಬರು ಯುವಕರಾದ ಫೈಜಾನ್ ಮತ್ತು ಯಾಸಿನ್ ಅರಾಫತ್ (25) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಓರ್ವ ಯುವಕ ಅರಾಫತ್ ಸುರಕ್ಷಿತವಾಗಿ ದಡ ಸೇರಿದ್ದರೆ, ಫೈಜಾನ್ ನೀರಿನಲ್ಲಿ ನಾಪತ್ತೆಯಾಗಿದ್ದ. ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ತಂಡಗಳಿಂದ ಶೋಧ ಕಾರ್ಯ ನಡೆಸಲಾಗಿತ್ತು.

ನಿನ್ನೆ ರಾತ್ರಿ 8 ಗಂಟೆಯವರೆಗೆ ಶೋಧ ಕಾರ್ಯ ನಡೆದಿತ್ತು. ನಂತರ ಸ್ಥಗಿತವಾಗಿತ್ತು. ಆದರೆ ಇದೀಗ ಫೈಜಾನ್ ನ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ತುಂಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.