ಉಡುಪಿ: ನಗರದ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ ಮಾಡಿಕೊಂಡಿದ್ದು, ಸೆಪ್ಟೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ಈವೆರಗೂ ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.
4 ಅಡಿ 10 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು, ಉಡುಪಿ ದೂ.ಸಂಖ್ಯೆ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.



