Home Latest ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕೆ.ಪಿ ಆಚಾರ್ಯ ನಿಧನ…!

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕೆ.ಪಿ ಆಚಾರ್ಯ ನಿಧನ…!

ಉಡುಪಿ : ಕಾಪು ವಿದ್ಯಾನಿಕೇತನ ಸಂಸ್ಥೆಯ ಸಂಸ್ಥಾಪಕ ಕೆಪಿ ಆಚಾರ್ಯ ನಿಧನರಾಗಿದ್ದಾರೆ. ಶಿಕ್ಷಣ ಕ್ಷೇತ್ರದ ಜೊತೆಗೆ ಹೋಟೆಲ್ ಉದ್ಯಮ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರು.

ಉಡುಪಿ ಮತ್ತು ಕಾಪು ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಇವರು ನೀಡಿದ ಕೊಡುಗೆ ಅಪಾರ. ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಗಲುವಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.