Home Crime ಕೊಚ್ಚಿಯಲ್ಲಿ ರಸ್ತೆ ಅಪಘಾತ : ಸುಳ್ಯ ಮೂಲದ ಯುವಕ ಮೃತ್ಯು…!!

ಕೊಚ್ಚಿಯಲ್ಲಿ ರಸ್ತೆ ಅಪಘಾತ : ಸುಳ್ಯ ಮೂಲದ ಯುವಕ ಮೃತ್ಯು…!!

ಸುಳ್ಯ: ಕೇರಳದ ಕೊಚ್ಚಿನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯ ಮೂಲದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಪೆಲ್ತಡ್ಕ ನಿವಾಸಿ ಇಬ್ರಾಹಿಂ ಪಿ.ಎ. ಅವರ ಪುತ್ರ ಇಯಾಸ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಇಯಾಸ್ ಅವರು ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.