Home Crime ಚಲಿಸುತ್ತಿದ್ದ ಕಾರಿಗೆ ಬೆಂಕಿ : ಸಂಪೂರ್ಣ ಸುಟ್ಟು ಕರಕಲು….!!

ಚಲಿಸುತ್ತಿದ್ದ ಕಾರಿಗೆ ಬೆಂಕಿ : ಸಂಪೂರ್ಣ ಸುಟ್ಟು ಕರಕಲು….!!

ಧಾರವಾಡ : ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಚಲಿಸುತ್ತಿದ್ದಾಗಲೇ ಬಾನೆಟ್ ಭಾಗದಿಂದ ಹೊಗೆ ಕಾಣಿಸಿಕೊಂಡಿದ್ದು, ಚಾಲಕ ಕೂಡಲೇ ಕಾರನ್ನು ರಸ್ತೆ ಬದಿ ನಿಲ್ಲಿಸಿ ಕೆಳಗಿಳಿದಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿ ಇಡೀ ಕಾರಿಗೆ ವ್ಯಾಪಿಸಿ ಧಗಧಗನೆ ಹೊತ್ತಿ ಉರಿದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.