ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದಲ್ಲಿ 50 ವರ್ಷದ ವಿಜಯ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಜಯ ಅವರ ಮನೆಯಲ್ಲಿ ಹೊಸತು ಕಾರ್ಯಕ್ರಮವಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಎಲ್ಲರೂ ಊಟ ಮುಗಿಸಿ ಮನೆಯ ಹೊರಗಡೆ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ವಿಜಯ ಅವರು ಮನೆಯ ಕೋಣೆಯ ಪಕ್ಕಾಸಿಗೆ ಹಗ್ಗದಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮೃತರ ತಾಯಿ ಗಿರಿಜ ಮರಕಾಲ್ತಿ (70) ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



