ಕೋಟ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಕ್ಕುಂಜೆ ಗ್ರಾಮದ ದೂಪದಕೊಡ್ಲು ಎಂಬಲ್ಲಿ 40 ವರ್ಷದ ರಾಘವೇಂದ್ರ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಘವೇಂದ್ರ ಅವರು ಕಕ್ಕುಂಜೆ ಗ್ರಾಮದ ದೂಪದಕೊಡ್ಲು ಎಂಬಲ್ಲಿನ ಮನೆಯಲ್ಲಿ ಒಬ್ಬರೇ ವಾಸವಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು.
ಅಕ್ಟೋಬರ್ 9ರ ಸಂಜೆ ವೇಳೆಯಿಂದ ಅಕ್ಟೋಬರ್ 11ರ ಬೆಳಿಗ್ಗೆ 8 ಗಂಟೆಯ ನಡುವಿನ ಅವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಅವರ ಸಂಬಂಧಿ, ಹಳ್ಳಾಡಿ-ಹರ್ಕಾಡಿ ಗ್ರಾಮದ ಕರುಣಾ ಕುಲಾಲ (43) ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



