Home Crime ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ಬರ್ಬರ ಹತ್ಯೆ : ಶಂಕೆ ಹಿನ್ನೆಲೆ ಪತ್ನಿಯನ್ನೇ ಚುಚ್ಚಿ ಕೊಂದ...

ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ಬರ್ಬರ ಹತ್ಯೆ : ಶಂಕೆ ಹಿನ್ನೆಲೆ ಪತ್ನಿಯನ್ನೇ ಚುಚ್ಚಿ ಕೊಂದ ಪತಿ…!!

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ನಡತೆ ಮೇಲಿನ ಶಂಕೆಯಿಂದ ಪತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಮಹಾರಾಷ್ಟ್ರ ಮೂಲದ ಸೋನಾಲಿ (30) ಕೊಲೆಯಾದ ದುರ್ದೈವಿ. ಶಿವಲಿಂಗಪ್ಪ ಕೊಲೆಗೈದ ಆರೋಪಿ (ಸಂಬಂಧ ಇನ್ನಷ್ಟೇ ದೃಢಪಡಬೇಕಿದೆ).

ಅನೈತಿಕ ಸಂಬಂಧದ ಶಂಕೆಯಿಂದ ಈ ಕೃತ್ಯ ಎಸಗಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ.