Home Crime ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ ಶಿಕ್ಷೆ ಪ್ರಕಟ…!!

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ ಶಿಕ್ಷೆ ಪ್ರಕಟ…!!

ಶಿವಮೊಗ್ಗ : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ನಗರದ ಪ್ರದೇಶವೊಂದರಲ್ಲಿ 22 ವರ್ಷದ ಯುವಕ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಕುರಿತು ನಗರದ ತೀರ್ಥನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಪೂರ್ಣಗೊಳಿಸಿದ ಅಂದಿನ ಪಿಐ ಮಂಜುನಾಥ್ ಬಿ. ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1,10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ ಎಂದು ತಿಳಿದು ಬಂದಿದೆ.

ಅಲ್ಲದೇ ನೊಂದ ಬಾಲಕಿಗೆ 5ಲಕ್ಷ ರೂ. ಪರಿಹಾರವನ್ನು ನೀಡಲು ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.