ತೀರ್ಥಹಳ್ಳಿ: ಬೇಟೆಗೆಂದು ಹೋಗಿದ್ದ ಸಂದರ್ಭದಲ್ಲಿ ಮಿಸ್ ಫೈರಿಂಗ್ ಆಗಿ ಯುವಕನೋರ್ವ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಕಟ್ಟೆಹಕ್ಕಲಿನಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಗೌತಮ್ (25) ಎಂದು ತಿಳಿಯಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಕಟ್ಟೆಹಕ್ಕಲಿಗೆ ಸ್ನೇಹಿತರ ಜೊತೆಗೆ ಬೇಟೆಗಾಗಿ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಮೃತಪಟ್ಟಿದ್ದಾನೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.