ಕುಂದಾಪುರ, ಅ.14: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಇಂಟಿರಿಯರ್ ಕೆಲಸಕ್ಕೆಂದು ಕಾರಿನಲ್ಲಿ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಳ್ನಾಡು ಗ್ರಾಮದ ಪ್ರಮೀಳಾ (33) ಅವರ ಪತಿ ಶಂಕರ ಆಚಾರ್ಯ (36) ಅವರು ಇಂಟಿರಿಯರ್ ಕೆಲಸ ನಿರ್ವಹಿಸುತ್ತಿದ್ದರು. ಅ.13 ರಂದು ಬೆಳಿಗ್ಗೆ 10:30ಕ್ಕೆ ಸಾಲಿಗ್ರಾಮಕ್ಕೆ ಕೆಲಸದ ನಿಮಿತ್ತ ಹೋಗುವುದಾಗಿ ಹೇಳಿ KA-20-MD-0300 ಶಿಫ್ಟ್ ಕಾರಿನಲ್ಲಿ ಮನೆಯಿಂದ ತೆರಳಿದ್ದರು.
ನಂತರ ಹಲವು ಬಾರಿ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಬರುತ್ತಿದ್ದು, ಸಂಬಂಧಿಕರು, ಸ್ನೇಹಿತರು ಮತ್ತು ಮನೆಯ ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 58/2026 – ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯಾರಿಗಾದರೂ ಈ ವ್ಯಕ್ತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.



