ಉಡುಪಿ: ಫ್ರೆಂಡ್ಸ್ ಬಳ್ಳಾಲ್ಬಾಗ್ ಬಿರುವೆರ್ ಕುಡ್ಲ (ರಿ.) ಉಡುಪಿ ಘಟಕದ ಮಾಜಿ ಅಧ್ಯಕ್ಷ ದಿ. ಕಿಶೋರ್ ಪೂಜಾರಿ ಅವರ ಪುಣ್ಯಸ್ಮರಣಾರ್ಥ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಫ್ರೆಂಡ್ಸ್ ಬಳ್ಳಾಲ್ಬಾಗ್ ಬಿರುವೆರ್ ಕುಡ್ಲ (ರಿ.) ಉಡುಪಿ ಘಟಕದ ಆಶ್ರಯದಲ್ಲಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ಹಾಗೂ ರಕ್ತ ಕೇಂದ್ರ, ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಈ ಶಿಬಿರ ನಡೆಯಲಿದೆ.
ದಿನಾಂಕ: 17-10-2026, ಶನಿವಾರ
ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 1:00 ರವರೆಗೆ
ಸ್ಥಳ: ರಕ್ತ ಕೇಂದ್ರ, ಕೆ.ಎಂ.ಸಿ ಮಣಿಪಾಲ
“ನಮ್ಮ ರಕ್ತದ ಒಂದು ಹನಿ, ಮತ್ತೊಬ್ಬರ ಬದುಕಿಗೆ ಹೊಸ ಭರವಸೆ” ಎಂಬ ಧ್ಯೇಯದೊಂದಿಗೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಅಗಲಿದ ಹಿರಿಯರ ನೆನಪನ್ನು ಮಾನವೀಯ ಸೇವೆಯ ಮೂಲಕ ಶಾಶ್ವತಗೊಳಿಸುವ ಉದ್ದೇಶ ಹೊಂದಲಾಗಿದೆ.
ಅರ್ಹ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜೀವ ಉಳಿಸುವ ಪುಣ್ಯಕಾರ್ಯದಲ್ಲಿ ಕೈಜೋಡಿಸಬೇಕಾಗಿ ಸಂಘಟಕರು ಮನವಿ ಮಾಡಿದ್ದಾರೆ.



