ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಸಂಟ್ಯಾರ್ ಹಾಗೂ ಪರ್ಪುಂಜ ನಡುವಿನಲ್ಲಿ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದು, ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಅತಿವೇಗದಿಂದ ಆಗಮಿಸಿದ ಲಾರಿ ಚಾಲಕ ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ. ಘಟನೆಯಿಂದ ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆದ್ದಾರಿಗೆ ಅಡ್ಡವಾಗಿ ಬಿದ್ದ ಲಾರಿಯಿಂದಾಗಿ ಹೆದ್ದಾರಿ ಸಂಚಾರಕ್ಕೆ ತಡೆಯುಂಟಾಯಿತು. ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ
ಪರಿಶೀಲನೆ ನಡೆಸಿದ್ದಾರೆ.




