Home Karnataka News ಕರ್ನಾಟಕದ 20ನೇ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ…!!

ಕರ್ನಾಟಕದ 20ನೇ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ…!!

ಬೆಂಗಳೂರು, ಅ.16: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹಿರಿಯ ಬಿಜೆಪಿ ನಾಯಕಿ ಡಾ. ಸುಧಾ ಯಾದವ್ ಅವರು ಇಂದು ಬೆಂಗಳೂರಿನ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರು ಡಾ. ಸುಧಾ ಯಾದವ್ ಅವರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅ.12 ರಂದು ಸುಧಾ ಯಾದವ್ ಅವರನ್ನು ರಾಜ್ಯಪಾಲರಾಗಿ ನೇಮಕ ಮಾಡಿದ್ದರು. ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಮುಕ್ತಾಯ ಹಿನ್ನೆಲೆಯಲ್ಲಿ ಈ ನೇಮಕ.

ರಾಜ್ಯದ 2ನೇ ಮಹಿಳಾ ರಾಜ್ಯಪಾಲ:
ವಿ.ಎಸ್. ರಮಾದೇವಿ (1999-2002) ನಂತರ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ 2ನೇ ಮಹಿಳೆ ಎಂಬ ಹೆಗ್ಗಳಿಕೆಗೆ ಡಾ. ಸುಧಾ ಯಾದವ್ ಪಾತ್ರರಾಗಿದ್ದಾರೆ.

ಯಾರು ಈ ಸುಧಾ ಯಾದವ್.?: ಹರಿಯಾಣ ಮೂಲದವರು, 61 ವರ್ಷ,ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಬಿಎಸ್ಎಫ್ ಡೆಪ್ಯೂಟಿ ಕಮಾಂಡೆಂಟ್ ಸುಖ್ಬೀರ್ ಸಿಂಗ್ ಯಾದವ್ ಅವರ ಪತ್ನಿ. ಪತಿ ಹುತಾತ್ಮರಾದ ನಂತರ ರಾಜಕೀಯ ಪ್ರವೇಶ,ಐಐಟಿ ರೂರ್ಕಿಯಲ್ಲಿ ಕೆಮಿಸ್ಟ್ರಿಯಲ್ಲಿ ಚಿನ್ನದ ಪದಕದೊಂದಿಗೆ ಎಂಎಸ್ಸಿ, ಪಿಎಚ್‌ಡಿ ಪದವೀಧರೆ,

1999-2004ರಲ್ಲಿ ಮಹೇಂದ್ರಗಢ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆ,ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ಒಬಿಸಿ ಮೋರ್ಚಾ ಉಸ್ತುವಾರಿ, 2022ರಲ್ಲಿ ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ 2ನೇ ಮಹಿಳೆ (ಸುಷ್ಮಾ ಸ್ವರಾಜ್ ನಂತರ),
2019-2022ರಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ

ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.