Home Crime ಬ್ರಹ್ಮಾವರ: ಕೆರೆಗೆ ಹಾರಿ 64 ವರ್ಷದ ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

ಬ್ರಹ್ಮಾವರ: ಕೆರೆಗೆ ಹಾರಿ 64 ವರ್ಷದ ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕುದಿ ಗ್ರಾಮದಲ್ಲಿ 64 ವರ್ಷದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಮೋಹನ (64) ಎಂದು ಗುರುತಿಸಲಾಗಿದೆ. ಇವರು ಅವಿವಾಹಿತರಾಗಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ದಿನಾಂಕ 14.10.2026ರ ರಾತ್ರಿ 11 ಗಂಟೆಯಿಂದ ದಿನಾಂಕ 16.10.2026ರ ಬೆಳಗ್ಗೆ 8 ಗಂಟೆಯ ನಡುವಿನ ಅವಧಿಯಲ್ಲಿ, ಮನೆಯ ಸಮೀಪದ ಪಾರ್ವತಿ ಬಾಯಿ ಎಂಬವರ ಗದ್ದೆಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮೃತರ ಚಿಕ್ಕಪ್ಪನ ಮಗ ಶಶಿಕಿರಣ ಉಳಿತ್ತಾಯ (33) ಅವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 64/2026, ಕಲಂ 194 ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.