Home Crime MRPLನಲ್ಲಿ ಸ್ಫೋಟ ಪ್ರಕರಣ : ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!!

MRPLನಲ್ಲಿ ಸ್ಫೋಟ ಪ್ರಕರಣ : ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!!

ಸುರತ್ಕಲ್ : ಎಂ.ಆರ್.ಪಿ.ಎಲ್.ನಲ್ಲಿ ಸೆ.30ರಂದು ನಡೆದಿದ್ದ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ವರದಿಯಾಗಿದೆ.

ಮೃತರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿ ರಾಜೇಶ್ ಡಿಸಿಲ್ವ ಎಂದು ತಿಳಿಯಲಾಗಿದೆ.

ರಾಜೇಶ್ ಡಿಸಿಲ್ವ ಹಲವು ವರ್ಷಗಳಿಂದ ಎಂ.ಆರ್.ಪಿ.ಎಲ್. ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.

ಇಂದು ಸಂಜೆಯ ವೇಳೆ ಮೃತದೇಹವನ್ನು ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದು ಬಂದಿದೆ.

ಎಂ ಆರ್ ಪಿ ಎಲ್ ನ ಫೇಸ್ 3ರ CHTUನ ಪ್ಲಾಂಟ್ ನಲ್ಲಿ ಸೆ.30ರಂದು ಭಾರೀ ಸ್ಫೋಟ ಸಂಭವಿಸಿ, ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ಮೃತಪಟ್ಟಿದ್ದು, ರಾಜೇಶ್ ಡಿಸಿಲ್ವ ಗಂಭೀರ ಸುಟ್ಟಗಾಯಗಳಿಂದ ನಗರದ ಫಾದರ್ ಮುಲ್ಲರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.

ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.