ಕೊಲ್ಲೂರು, ಅ.17: ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ನಿರ್ಮಾಣ ಹಂತದ ದೇವಸ್ಥಾನದ ಮೇಲಿನಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಶಿಲ್ಪಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಕುಕ್ಕಂದೂರು ಗ್ರಾಮ, ಕಾರ್ಕಳ ತಾಲೂಕಿನ ಶರತ್ ಕುಮಾರ್ (30) ಎಂದು ಗುರುತಿಸಲಾಗಿದೆ.
ಇವರು ಕಳೆದ ಒಂದು ತಿಂಗಳಿನಿಂದ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕಂಬಳಗದ್ದೆ ಬಳಿಯ ದೇವಸ್ಥಾನದಲ್ಲಿ ಶಿಲ್ಪಿ ಕೆಲಸ ಮಾಡುತ್ತಿದ್ದರು.
ಅ.16 ರಂದು ಸಂಜೆ 4:30ರ ಸುಮಾರಿಗೆ ದೇವಸ್ಥಾನದಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಹಣೆಗೆ, ಎಡ ಭುಜಕ್ಕೆ ಒಳಜಖಂ ಹಾಗೂ ದೇಹದ ಇತರೆಡೆ ಒಳಪೆಟ್ಟಾಗಿತ್ತು. ತಕ್ಷಣ ಕುಂದಾಪುರದ ಚಿನ್ಮಯಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 8:45ಕ್ಕೆ ಮೃತಪಟ್ಟಿದ್ದಾರೆ ಎಂದು ತಂದೆ ಶಿವ (58) ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 20/2026, ಕಲಂ 194 BNSS ರಂತೆ ಪ್ರಕರಣ ದಾಖಲಾಗಿದೆ.



