Home Crime ಮೈಸೂರಿನ ಬಲೂನ್‌ ಮಾರುವ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲುಶಿಕ್ಷೆ…!!

ಮೈಸೂರಿನ ಬಲೂನ್‌ ಮಾರುವ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲುಶಿಕ್ಷೆ…!!

ಮೈಸೂರು : ದಸರಾ ಮಹೋತ್ಸವದ ಸಂದರ್ಭದಲ್ಲಿ ಒಂಭತ್ತು ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮೈಸೂರಿನ ನ್ಯಾಯಾಲಯವು ಅಪರಾಧಿ ಕಾರ್ತಿಕ್‌ (32) ಎಂಬಾತನಿಗೆ ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿದೆ.

ಪ್ರಕರಣದ ವಿವರ: ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಮಯದಲ್ಲಿ ವ್ಯಾಪಾರಕ್ಕೆಂದು ಕಲಬುರಗಿಯಿಂದ ಕುಟುಂಬವೊಂದು ಮೈಸೂರಿಗೆ ಬಂದಿತ್ತು. ಈ ಕುಟುಂಬದ 9 ವರ್ಷದ ಬಾಲಕಿ ದಸರಾ ವಸ್ತುಪ್ರದರ್ಶನದ ಆವರಣದ ಬಳಿ ಬಲೂನ್‌ ಮಾರಾಟ ಮಾಡುತ್ತಿದ್ದಳು. ರಾತ್ರಿ ಟೆಂಟ್‌ನಲ್ಲಿ ತನ್ನ ಕುಟುಂಬದ ಜೊತೆಗೆ ನಿದ್ರೆ ಮಾಡುತ್ತಿದ್ದಾಗ, ಅಪರಾಧಿ ಕಾರ್ತಿಕ್‌ ಬಾಲಕಿಯನ್ನು ಅಪಹರಣ ಮಾಡಿ ಕ್ರೂರವಾಗಿ ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಿ ಮೃತದೇಹವನ್ನು ಬಿಟ್ಟು ನಾಪತ್ತೆಯಾಗಿದ್ದ.

ಈ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕೂಡಲೇ ಪೊಲೀಸ್‌ನವರು ಕಾರ್ಯಪ್ರವೃತ್ತರಾಗಿ ಘಟನೆ ನಡೆದ 24 ಗಂಟೆಯೊಳಗೆ ಆರೋಪಿ ಕಾರ್ತಿಕ್‌ನನ್ನು ಬಂಧಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ನ್ಯಾಯಾಲಯವು ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.