ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಲಾಡ್ಜ್ವೊಂದರಲ್ಲಿ ಉದ್ಯೋಗಿಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮೂವರ ವಿರುದ್ಧ ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ತಾಲೂಕಿನ ಕೊಯಿಲಾ ನಿವಾಸಿ ಮೊಹಮ್ಮದ್ ರಿಫೈ (27) ಹಲ್ಲೆಗೊಳಗಾದ ಉದ್ಯೋಗಿ ಎಂದು ಗುರುತಿಸಲಾಗಿದೆ.
ಅವರು ಪುತ್ತೂರಿನ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ದೂರಿನ ಪ್ರಕಾರ, ಫಾರೂಕ್, ಸೋನು ಮತ್ತು ಇಶಾನ್ ಎಂದು ಗುರುತಿಸಲಾದ ಮೂವರು ಆರೋಪಿಗಳು ಶನಿವಾರ ರಾತ್ರಿ ಲಾಡ್ಜ್ಗೆ ಬಂದಿದ್ದರು. ಈ ವೇಳೆ ರಿಫೈ ಅವರನ್ನು ಅಶ್ಲೀಲವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಿಫೈ ನೀಡಿದ ದೂರಿನ ಆಧಾರದ ಮೇಲೆ ಪುತ್ತೂರು ಪಟ್ಟಣ ಪೊಲೀಸರು ಅಪರಾಧ ಸಂಖ್ಯೆ 126/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್), 2023ರ ಸೆಕ್ಷನ್ 126(2), 352, 351(2) ಮತ್ತು 115(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



