Home Crime ಉಡುಪಿ: ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ…!!

ಉಡುಪಿ: ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ…!!

ಉಡುಪಿ:‌ ನಗರ ಸಮೀಪ ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಮೃತಪಟ್ಟವರು ರಾಮ ಅಮೀನ್ (58) ಎಂದು ತಿಳಿಯಲಾಗಿದೆ.

ಬೆಳಿಗ್ಗೆ 8 ಗಂಟೆಗೆ ಮನೆಯ ಬೆಡ್ ರೂಂ ಗೆ ಹೋದವರು ಹೊರಗೆ ಬಾರದಿದ್ದಾಗ ಮಗಳು ಅನುಷ ಆರ್ ಅಮೀನ್ (24) ಅವರು ಬಾಗಿಲು ತೆರೆದು ನೋಡಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಅಜ್ಜರಕಾಡು ಸರ್ಕಾರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು, ಇದೇ ಕಾರಣಕ್ಕೆ ಮನನೊಂದು ಈ ನಿರ್ಧಾರ ಕೈಗೊಂಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 65/2026, ಕಲಂ 194 BNSS ರಂತೆ ಪ್ರಕರಣ ದಾಖಲಾಗಿದೆ.