ಮಂಗಳೂರು: ನಗರದ ಉಳ್ಳಾಲ ಸಮೀಪದ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯ ಬೋಳಿಯಾರ್ ಪೆಟ್ರೋಲ್ ಬಂಕ್ ಬಳಿ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮಂಜನಾಡಿ ಮೂಲದ ಮೊಹಮ್ಮದ್ ಅರ್ಫಾಝ್ (22) ಮತ್ತು ಜುನೈದ್ (23) ಎಂದು ತಿಳಿದು ಬಂದಿದೆ.
ವೇಗವಾಗಿ ಬಂದ ಮಹೀಂದ್ರಾ ಪಿಕಪ್ ವಾಹನವು ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ವಿದ್ಯುತ್ ಕಂಬವೇ ತುಂಡಾಗಿ ನೆಲಕ್ಕುರುಳಿದೆ. ಅಪಘಾತದ ಭೀಕರ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣೆ ಹಾಗೂ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.



