Home Crime ಉಲಾಯಿ ಪಿದಾಯಿ ಜೂಜಾಟಕ್ಕೆ ಖಾಕಿ ದಾಳಿ : ಐವರು ಪೊಲೀಸ್ ವಶಕ್ಕೆ…!!

ಉಲಾಯಿ ಪಿದಾಯಿ ಜೂಜಾಟಕ್ಕೆ ಖಾಕಿ ದಾಳಿ : ಐವರು ಪೊಲೀಸ್ ವಶಕ್ಕೆ…!!

ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಉಲಾಯಿ ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 20ರಂದು ಸಂಜೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಉಲಾಯಿ ಪಿದಾಯಿ ಜೂಜಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು.

ಮಾಹಿತಿಯ ಆಧಾರದ ಮೇಲೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್. ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.