Home Crime ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಆಟೋ ಚಾಲಕ ನೇಣಿಗೆ ಶರಣು…!!

ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಆಟೋ ಚಾಲಕ ನೇಣಿಗೆ ಶರಣು…!!

ಆನೇಕಲ್: ಪತ್ನಿಯ ಅಕ್ರಮ ಸಂಬಂಧದ ಆರೋಪ ಮತ್ತು ಕಿರುಕುಳದಿಂದ ಮನನೊಂದು ಆಟೋ ಚಾಲಕನೊಬ್ಬ ನೇಣಿಗೆ ಶರಣು ಮಾಡಿಕೊಂಡಿರುವ ಘಟನೆ ತಾಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ನೆರಿಗಾ ಗ್ರಾಮದ ಮುನಿಕೃಷ್ಣ (35) ಎಂದು ಗುರುತಿಸಲಾಗಿದೆ.

ಈತ ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದರು. ಮುನಿಕೃಷ್ಣ ಅವರಿಗೆ 10 ವರ್ಷಗಳ ಹಿಂದೆ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯ ನಯನಾ ಅವರೊಂದಿಗೆ ವಿವಾಹವಾಗಿತ್ತು.

ದಂಪತಿಗೆ 6 ವರ್ಷದ ಮಗನಿದ್ದಾನೆ. ಕಳೆದ ಎರಡು ವರ್ಷಗಳಿಂದ ಪತ್ನಿ ನಯನಾ ಅವರಿಗೆ ಅದೇ ಗ್ರಾಮದ ಕುಮಾರ್ ಎಂಬಾತನೊಂದಿಗೆ ಅನೈತಿಕ ಸಂಬಂಧವಿತ್ತು ಎಂದು ಹೇಳಲಾಗಿದೆ.

ಕುಮಾರ್ ಕ್ಯಾಬ್ ಚಾಲಕನಾಗಿದ್ದು, ಆಗಾಗ ಮನೆಗೆ ಬಂದು ಹೋಗುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.