ಬೆಳ್ಕಳೆ: ಉಡುಪಿಯ ಲಕ್ಷ್ಮೀ ನಗರದ ಸಮೀಪ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ವಿಜಯದಶಮಿ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮುಕ್ತಸರರಾದ ಐತು ಎಂ ಶೆಟ್ಟಿ, ಭಕ್ತವೃಂದದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಟಿ, ಜೀರ್ಣೋದ್ಧಾರ ಸಮಿತಿಯ ಶಂಭು ಶೆಟ್ಟಿ, ದೇವದಾಸ್ ಸುವರ್ಣ, ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಂದರ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ ಅಂಚನ್, ಮಮತಾ ಶೆಟ್ಟಿ, ಅನುಷಾ ಆಚಾರ್ಯ, ಸತೀಶ್ ಸೇರಿದಂತೆ ಆಡಳಿತ ಸಮಿತಿ, ಅರ್ಚಕ ವೃಂದ, ಭಕ್ತಾಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



